ಅಹಮದಾಬಾದ್: ಗುಜರಾತ್ ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆ ಅವಾಂತರದ ಪರಿಣಾಮವಾಗಿ 28 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಕಳೆದ ಮೂರು ದಿನಗಳಿಂದ ಗುಜರಾತ್ ನಲ್ಲಿ ಭಾರೀ ಮಳೆಯಾಗುತ್ತಿದೆ. 18 ಸಾವಿರಕ್ಕೂ ಅಧಿಕ ಮಂದಿಯನ್ನು ಪ್ರವಾಹ ಪೀಡಿತ ಸ್ಥಳದಿಂದ ಸುರಕ್ಷಿತ ತಾಣಕ್ಕೆ ರವಾನಿಸಲಾಗಿದ್ದು, ಸುಮಾರು 11 ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಮೋರ್ಬಿ, ವಡೋದರಾ, ಭರೂಚ್, ಜಾಮ್ ನಗರ, ಅರಾವಳಿ, ಪಂಚಮಹಲ್, ದ್ವಾರಕಾ ಮತ್ತು ದಂಗ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಆನಂದ್ ಜಿಲ್ಲೆಯಲ್ಲಿ ಆರು, ಅಹಮದಾಬಾದ್‌ನಲ್ಲಿ ನಾಲ್ಕು, ಗಾಂಧಿನಗರ, ಖೇಡಾ, ಮಹಿಸಾಗರ್, ದಾಹೋದ್ ಮತ್ತು ಸುರೇಂದ್ರನಗರ ಜಿಲ್ಲೆಗಳಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ ಎಂದು ಗುಜರಾತ್ ಸರ್ಕಾರ ಮಾಹಿತಿ ನೀಡಿದೆ.
ಮೃತರ ಪೈಕಿ ಏಳು ಜನರು ಮೋರ್ಬಿ ಜಿಲ್ಲೆಯ ಧವಾನಾ ಗ್ರಾಮದ ಬಳಿ ಉಕ್ಕಿ ಹರಿಯುತ್ತಿದ್ದ ಕ್ರಾಸ್‌ವೇ ದಾಟುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಗುರುವಾರ ಗುಜರಾತ್‌ನಾದ್ಯಂತ 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು 22 ಜಿಲ್ಲೆಗಳಿಗೆ ಹಳದಿ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q