ಸಿರಾ: ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಕುರುಬ ಸಮುದಾಯಕ್ಕೆ ಪ್ರಗತಿಯನ್ನು ಕಾಣದಿರುವುದು ವಿಷಾದ ಸಂಗತಿ ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ರಾಷ್ಟ್ರಧ್ಯಕ್ಷ ರಾಮಚಂದ್ರಪ್ಪ ತಿಳಿಸಿದರು.
ಇದೇ ತಿಂಗಳು 28 ರಂದು ತುಮಕೂರು ಸಿರಾ ಗೇಟ್ ಬಳಿಯಿರುವ ಕಾಳಿದಾಸ ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾ ಕುರುಬ ಜಾಗೃತಿ ಸಮಾವೇಶವನ್ನು ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.
ಕುರುಬ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಮಾತನಾಡಿ, ಮುಂಬರುವ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಹಿಂದುಳಿದ ಸಮುದಾಯದ ಮೀಸಲಾತಿಯನ್ನು ತೆಗೆಯುವಂತಹುನ್ನಾರ ನಡೆಯುತ್ತಿದೆ. ಇದರ ವಿರುದ್ಧ ಬೃಹತ್ ಹೋರಾಟವನ್ನು ನಡೆಸುತ್ತೇವೆ.. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಶ್ವರಪ್ಪ ಸೇರಿದಂತೆ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ಚಂದ್ರೇಗೌಡ ಮುಖಂಡ ಜಕ್ಕನಹಳ್ಳಿ ಲಿಂಗರಾಜ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ ನಾರಾಯಣ ಹುಳಿಯಾರು ಸಿದ್ದರಾಮಯ್ಯ ತರಕಾರಿ ಗಂಗಾಧರ್ ಕುರುಬ ಸಮಾಜದ ಹಲವಾರು ಮುಖಂಡರು ಭಾಗವಹಿಸಿದ್ದರು.
ವರದಿ: ಆನಂದ, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5