nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನಕ್ಕೆ ಜಿಲ್ಲೆಯ 29 ಗ್ರಾಮಗಳು ಆಯ್ಕೆ: ಶುಭ ಕಲ್ಯಾಣ್
    ತುಮಕೂರು September 27, 2024

    ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನಕ್ಕೆ ಜಿಲ್ಲೆಯ 29 ಗ್ರಾಮಗಳು ಆಯ್ಕೆ: ಶುಭ ಕಲ್ಯಾಣ್

    By adminSeptember 27, 2024No Comments2 Mins Read
    shuba kalyani

    ತುಮಕೂರು: ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅಭಿವೃದ್ಧಿಪಡಿಸಲು ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ ಜಿಲ್ಲೆಯ ತುಮಕೂರು, ಕೊರಟಗೆರೆ, ಸಿರಾ, ಪಾವಗಡ, ಮಧುಗಿರಿ, ಗುಬ್ಬಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ವ್ಯಾಪ್ತಿಯ 29 ಗ್ರಾಮಗಳನ್ನು ಆಯ್ಕೆ ಮಾಡಿದ್ದು, ಮೂಲಭೂತ ಸೌರ್ಯಗಳ ಅಭಿವೃದ್ದಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರಿಸಿದ 79.156 ಕೋಟಿ ರೂ.ಗಳ ಅನುದಾನದಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 63,000 ಗ್ರಾಮಗಳನ್ನು ಅಭಿವೃದ್ದಿ ಪಡಿಸಲು ಈ ಕ್ರಿಯಾಯೋಜನೆಯನ್ನು ರೂಪಿಸಲಾಗಿದೆ.


    Provided by
    Provided by

    ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಯನ್ನು ಅನುಷ್ಟಾನಗೊಳಿಸುವ ಜವಾಬ್ದಾರಿ ಹೊತ್ತಿದೆ. ದೇಶದ ಸುಮಾರು 5 ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ. 2024–25 ರಿಂದ 2028–29ನೇ ಸಾಲಿನವರೆಗೆ 5 ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. 2024–25 ರಿಂದ 2025–26ನೇ ಸಾಲಿಗೆ ಮೊದಲ ಹಂತದಲ್ಲಿ 4.000 ಕೋಟಿ ರೂ.ಗಳ ಅನುದಾನವನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ನಿಗಧಿ ಮಾಡಲಾಗಿದೆ.

    ಈ ಅಭಿಯಾನದಡಿ ತುಮಕೂರು ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಜನಾಂಗದವರು ಹೆಚ್ಚಾಗಿರುವ 29 ಗ್ರಾಮಗಳನ್ನು ಆಯ್ಕೆ ಮಾಡಿ ಭೌತಿಕ ಗುರಿ ನಿಗದಿಪಡಿಸಲಾಗಿದ್ದು, ವಿವಿಧ 17 ಇಲಾಖೆಗಳು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಿವೆ.
    ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಪಕ್ಕಾ ಮನೆ, ಸಂಪರ್ಕ ರಸ್ತೆಗಳು, ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ನೀರು ಸರಬರಾಜು(ಜೆಜೆಎಂ), ವಿದ್ಯುತ್ ಇಲಾಖೆಯಿಂದ ಮನೆಗಳ ವಿದ್ಯುದೀಕರಣ (ಆರ್‌ಡಿಎಸ್‌ಎಸ್), ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಆಫ್–ಗ್ರಿಡ್ ಸೌರ, ಹೊಸ ಸೌರ ವಿದ್ಯುತ್ ಯೋಜನೆ, ಆರೋಗ್ಯ ಇಲಾಖೆಯಿಂದ ಸಂಚಾರಿ ವೈದ್ಯಕೀಯ ಘಟಕಗಳು, ರಾಷ್ಟ್ರೀಯ ಆರೋಗ್ಯ ಮಿಷನ್, ಆಯುಷ್ಮಾನ್ ಕಾರ್ಡ್, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯಿಂದ ಎಲ್‌ಪಿಜಿ ಪಿಎಂ ಉಜ್ಜಲ ಯೋಜನೆಯಡಿ ಸಂಪರ್ಕಗಳು, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ ಪೋಷಣ್ ಅಭಿಯಾನ್, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿನಿಲಯಗಳ ನಿರ್ಮಾಣ, ಆಯುಷ್ ಇಲಾಖೆಯಿಂದ ಪೋಷಣ್ ವಾಟಿಕಾಸ್, ಟೆಲಿಕಾಂ ಇಲಾಖೆಯಿಂದ ಯುನಿವರ್ಸಲ್ ಸೇವೆ, ಕೌಶಾಲ್ಯಾಭಿವೃದ್ಧಿ ಇಲಾಖೆಯಿಂದ ಸ್ಕಿಲ್ ಇಂಡಿಯಾ, ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಇಲಾಖೆಯಿಂದ ಡಿಜಿಟಲ್ ಇನಿಶೀಯೇಟಿವ್ಸ್, ಕೃಷಿ ಇಲಾಖೆಯಿಂದ ಸುಸ್ಥಿರ ಕೃಷಿ ಉತ್ತೇಜನ, ಮೀನುಗಾರಿಕೆ ಇಲಾಖೆಯಿಂದ ಮೀನು ಸಂಸ್ಕೃತಿ ಬೆಂಬಲ, ಪಶುಸಂಗೋಪನೆ ಇಲಾಖೆಯಿಂದ ಜಾನುವಾರು ಪಾಲನೆ, ಪಂಚಾಯತ್ ರಾಜ್ ಇಲಾಖೆಯಿಂದ ಸಾಮರ್ಥ್ಯ ಕಟ್ಟಡ, ಪ್ರವಾಸೋದ್ಯಮ ಇಲಾಖೆಯಿಂದ ಟ್ರೈಬಲ್ ಹೋಂ ಸ್ಟೇಸ್, ಸ್ವದೇಶ ದರ್ಶನ ಬುಡಕಟ್ಟು ವ್ಯವಹಾರಗಳ ಸಚಿವಾಲಯದಿಂದ ಪ್ರಧಾನಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆ ಅನುಷ್ಟಾನಗೊಳ್ಳಲಿವೆ.

    ಅಭಿಯಾನದಡಿ ಜಿಲ್ಲೆಯಲ್ಲಿ 100 ಬುಡಕಟ್ಟು ಬಹು ಉಪಯೋಗಿ ಮಾರ್ಕೆಟಿಂಗ್ ಕೇಂದ್ರಗಳು, ಆಶ್ರಮ ಶಾಲೆಗಳು, ವಿದ್ಯಾರ್ಥಿನಿಲಯಗಳು, ಸರ್ಕಾರಿ ಅಥವಾ ರಾಜ್ಯ ಬುಡಕಟ್ಟು ವಸತಿ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸುಧಾರಿಸುವುದು, ಕೌನ್ಸಿಲಿಂಗ್ ಬೆಂಬಲ, ಅರಣ್ಯ ಹಕ್ಕು ಕಾಯ್ದೆ–2006 ಮತ್ತು ಸಮುದಾಯ ಅರಣ್ಯ ಹಕ್ಕು ನಿರ್ವಹಣೆ ಮಧ್ಯಸ್ಥಿಕೆಗಳಿಗೆ ಬೆಂಬಲ, ಯೋಜನಾ ನಿರ್ವಹಣಾ ನಿಧಿಗಳು, ಉತ್ಪನ್ನ ಪ್ರದರ್ಶನ ನಿಡುವ ಬುಡಕಟ್ಟು ಜಿಲ್ಲೆಗಳಿಗೆ ಪ್ರೋತ್ಸಾಹ ನೀಡಲು ಅವಕಾಶ ಕಲ್ಪಿಸಲಾಗುವುದು.

    ಈ ಯೋಜನೆಗೆ ತುಮಕೂರು ಜಿಲ್ಲೆಯ, ತುಮಕೂರು, ಕೊರಟಗೆರೆ, ಸಿರಾ, ಪಾವಗಡ, ಮಧುಗಿರಿ, ಗುಬ್ಬಿ, ಚಿಕ್ಕನಾಯಕನಹಳ್ಳಿ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಟ್ಟ 29 ಗ್ರಾಮಗಳ ಎಲ್ಲಾ ಬುಡಕಟ್ಟು ಜನಾಂಗದವರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.