ತುಮಕೂರು: ಇಲ್ಲಿನ ಸದಾಶಿವನಗರದ 6ನೇ ಮುಖ್ಯ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಫೆ.3 ರಿಂದ 5ರವರೆಗೆ 29ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀನರಸಿಂಹಸ್ವಾಮಿಯ ತಿರುಕಲ್ಯಾಣೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಫೆ.3ರಂದು ಬೆಳಿಗ್ಗೆ 7 ಗಂಟೆಗೆ ಸ್ವಾಮಿಗೆ ಕುಂಭ ಕ್ಷೀರಾಭಿಷೇಕ ಹಾಗೂ ಸಂಜೆ 6:30ಕ್ಕೆ ಮಹಾಮಂಗಳಾರತಿ ನೆರವೇರಿತು. ಮಹಿಳೆಯರಿಗೆ ಮತ್ತು ಮಕ್ಕಳಿಗೆ ರಂಗೋಲಿ ಸ್ಪರ್ಧೆ ಮತ್ತು ಬಹುಮಾನ ವಿತರಣೆ ಏರ್ಪಡಿಸಲಾಗಿದೆ.
ಫೆ.4 ರಂದು ಬೆಳಿಗ್ಗೆ 5 ಗಂಟೆಗೆ ಸ್ವಾಮಿಗೆ ಮಹಿಳೆಯರಿಂದ ಗಂಗಾಪೂಜೆ ನೆರವೇರಲಿದ್ದು, ಶ್ರೀ ಲಕ್ಷ್ಮಿನರಸಿಂಹಸ್ವಾಮಿಯವರ ತಿರುಕಲ್ಯಾಣೋತ್ಸವ ನೆರವೇರಲಿದೆ.
ಕಾರ್ಯಕ್ರಮಕ್ಕೆ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಮಠದ ಶ್ರೀ ಈಶ್ವರನಂದಾಪುರಿ ಸ್ವಾಮೀಜಿ, ಬೆಳ್ಳಾವಿ ಕಾರದೇಶ್ವರ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ ಭಾಗಿಯಾಗಲಿದ್ದಾರೆ. ಫೆ.5 ರಂದು ವಸಂತೋತ್ಸವ ಸೇವೆ ಏರ್ಪಡಿಸಲಾಗಿದೆ. ಇದರೊಂದಿಗೆ ಸ್ವಾಮಿಗೆ ವಿಶೇಷ ಪೂಜೆ ನೆರವೇರಲಿದ್ದು, ಹಿರೇಮಠಾಧ್ಯಕ್ಷರಾದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4