ತುಮಕೂರು: ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ತುಮಕೂರು ಜಿಲ್ಲೆಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ಪರೀಕ್ಷಾ ಮಂಡಳಿಯ ಗೈಡ್ ಲೈನ್ ಹಾಗೂ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪಿಯು ಇಲಾಖೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸರ್ವ ಸಿದ್ಧತೆ ನಡೆಸಿದ್ದು, ಜಿಲ್ಲೆಯಲ್ಲಿ ಈ ಭಾರಿ ಒಟ್ಟು 28,090 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.
ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ ಕಲಾವಿಭಾಗದಲ್ಲಿ 8,185, ವಾಣಿಜ್ಯ ವಿಭಾಗದಲ್ಲಿ 11,177 ಹಾಗೂ ವಿಜ್ಞಾನ ವಿಭಾಗದಲ್ಲಿ 8,725 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ.
ಜಿಲ್ಲೆಯಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಯು ನರಸಿಂಹಮೂರ್ತಿ ಮಾಹಿತಿ ನೀಡಿದರು.
ವರದಿ: ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5