ದ್ವಿತೀಯ ಪಿ.ಯು ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ (PUC Final exam time table). ಏಪ್ರಿಲ್ 22 ರಿಂದ ಮೇ 18 ರವರೆಗೆ ಪಿಯು ದ್ವಿತೀಯ ಪರೀಕ್ಷೆ ನಡೆಸಲು ಪಿಯು ಬೋರ್ಡ್ ಮುಂದಾಗಿದೆ. ದ್ವಿತೀಯ ಪಿ.ಯುಸಿ ಪರೀಕ್ಷೆಯ ಅಂತಿಮ ಮತ್ತು ಪರಿಷ್ಕೃತ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಮಂಡಳಿ ಪ್ರಕಟಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾ ಪಟ್ಟಿ ಪ್ರಕಟವಾಗಿದೆ (PUC Final exam time table). ಏಪ್ರಿಲ್ 22 ರಿಂದ ಪರೀಕ್ಷೆ ಆರಂಭವಾಗಲಿದೆ. ಮೇ 18ರವರೆಗೆ ಪರೀಕ್ಷೆ ನಡೆಯಲಿದೆ. ಇದೀಗ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇನ್ನು ಇದರಲ್ಲಿ ಯಾವುದೇ ಬದಲಾವಣೆ ಮಾಡಲಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಸ್ಪಷ್ಟಪಡಿಸಿದೆ (PUC exam date).
ದ್ವಿತೀಯ ಪಿ.ಯು ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಈ ಮೊದಲು ಪ್ರಕಟಿಸಲಾಗಿದ್ದು, ಅದರಲ್ಲಿ ಏಪ್ರಿಲ್ 22ರಿಂದ ಮೇ 11ರವರೆಗೆ ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು. ಅಲ್ಲದೆ, ಆಕ್ಷೇಪಣೆಗಳನ್ನು ಸಲ್ಲಿಸಲು ಮಾರ್ಚ್ 5ರ ಸಂಜೆ 5 ಗಂಟೆವರೆಗೆ ಸಮಯ ನೀಡಲಾಗಿತ್ತು. ಆದರೆ ಈ ಸಮಯದಲ್ಲಿ common law admission test, AIMA UGATExam ಮತ್ತು Navodaya Vidyalaya Exam ನಿಗದಿಯಾಗಿದ್ದರಿಂದ ವಿದ್ಯಾರ್ಥಿಗಳು ಆಕ್ಷೇಪಣೆ ಸಲ್ಲಿಸಿದ್ದರು.
ಈ ಆಕ್ಷೇಪಣೆ ಗಳನ್ನು ಪರಿಗಣಿಸಿ, ಏಪ್ರಿಲ್ 22 ರಿಂದ ಮೇ 18 ರವರೆಗೆಪರೀಕ್ಷೆಯನ್ನು ನಿಗದಿ ಮಾಡಲಾಗಿದೆ. ಅಲ್ಲದೆ ಇದು ಅಂತಿಮ ವೇಳಾಪಟ್ಟಿಯಾಗಿದ್ದು, ಇನ್ನು ಬದಲಾವಣೆಗೆ ಅವಕಾಶ ಇಲ್ಲ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB