ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ 2 ಫಲಿತಾಂಶ 2023 ಪ್ರಕಟಿಸಿದೆ. ಆಗಸ್ಟ್ 21 ಮತ್ತು ಸೆಪ್ಟೆಂಬರ್ 2 ರ ನಡುವೆ 2023 ರ ದ್ವಿತೀಯ ಪೂರಕ ಪಿಯು ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ನಿಂದ ಡೌನ್ ಲೋಡ್ ಮಾಡಬಹುದು.
ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 1,21,179 ವಿದ್ಯಾರ್ಥಿಗಳ ಪೈಕಿ 1,19,183 ಜನ ಪರೀಕ್ಷೆಗೆ ಹಾಜರಾಗಿದ್ದು, 41,961 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.


