ಮುಂಬೈ: 20 ಭಾರತೀಯ ನಕ್ಷತ್ರ ಆಮೆಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮೀರಾರೋಡ್ ಪಶ್ಚಿಮ ಉಪನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ನದೀಮ್ ಶುಜಾವುದ್ದೀನ್ ಶೇಖ್ (33) ಬಂಧಿತ ಆರೋಪಿಯಾಗಿದ್ದಾನೆ. ಕಳ್ಳಸಾಗಣೆ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಬೊರಿವಲಿಯ ಗಣಪತ್ ಪಾಟೀಲ್ ನಗರ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದು, 20 ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಶಪಡಿಸಿಕೊಂಡ ಆಮೆಗಳ ಒಟ್ಟು ಮೊತ್ತ ಸುಮಾರು 3.5 ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ ಎಂದು ಎಂಎಚ್ ಬಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz