ರಾಜ್ಯ ಕಾಂಗ್ರೆಸ್ ಪಕ್ಷವು ಮೂರು ಹಂತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿದೆ.
ಫೆಬ್ರವರಿ 27 ರಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಟಿಕೆಟ್ ಫೈನಲ್ ಆಗಲಿದೆ ಎನ್ನಲಾಗಿದೆ.
ಮೂರು ಹಂತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಯಾವುದೇ ಗೊಂದಲವಿಲ್ಲದ 140-150 ಕ್ಷೇತ್ರಗಳ ಮೊದಲ ಪಟ್ಟಿ, ಗೊಂದಲ ಬಗೆಹರಿಸಿಕೊಂಡ 30-40 ಅಭ್ಯರ್ಥಿಗಳ ಎರಡನೇ ಪಟ್ಟಿ, ಬಹಳಷ್ಟು ಗೊಂದಲ, ಸೋಲುವ ಆತಂಕವಿರುವ ಕ್ಷೇತ್ರಗಳ ಮೂರನೇ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


