ಬೆಳಗಾವಿ: ಬೆಳಗಾವಿಯಲ್ಲಿ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಭೀಕರ ಘಟನೆ ವರದಿಯಾಗಿದೆ.
ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಭಾರೀ ಮಳೆಯ ಪರಿಣಾಮವಾಗಿ ಮನೆಯ ಗೋಡೆ ಕುಸಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಳನ್ನು ಕೃತಿಕಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಕೆಯ ತಾಯಿ ರೇಷ್ಮಾ ಮತ್ತು ತಂಗಿ ಖುಷಿ ಗಾಯಗೊಂಡಿದ್ದಾರೆ. ಆದರೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಅವರನ್ನು ಗೋಕಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬೆಳಿಗ್ಗೆ 7.30 ರ ಸುಮಾರಿಗೆ ಮಹಾಲಿಂಗೇಶ್ವರ ನಗರದಲ್ಲಿ ಈ ಘಟನೆ ಸಂಭವಿಸಿದೆ. ಕೃತಿಕಾ ಮತ್ತು ಆಕೆಯ ಸಹೋದರಿ ಖುಷಿ ಮಲಗಿದ್ದಾಗ, ಭಾರೀ ಮಳೆಯ ಸಮಯದಲ್ಲಿ ಪಕ್ಕದ ಮನೆಯ ಗೋಡೆ ಕುಸಿದು ಅವರ ಮೇಲೆ ಬಿದ್ದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW