ಸಿರಾ: ದೇಶದಲ್ಲಿ ಕೊವಿಡ್ 19 ಮೂರನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಲೂಕಿನ ಜನರಿಗೆ ಸಿರಾ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲಾ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಬಳಸಬೇಕು. ಮಾರುಕಟ್ಟೆ, ಬಸ್‌ನಿಲ್ದಾಣ, ಹೋಟೆಲ್, ಅಂಗಡಿ, ಸಿನಿಮಾ ಥಿಯೇಟರ್ ಹಾಗೂ ಇತರ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ದೈಹಿಕ ಅಂತರವನ್ನು ಕಾಪಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಮಾಸ್ಕ್ ಧರಿಸದೇ ಇರುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ದೈಹಿಕ ಅಂತರವನ್ನು ಕಾಪಾಡದೇ ಇದ್ದ ಪಕ್ಷದಲ್ಲಿ ಸರ್ಕಾರದಿಂದ ನಿಗದಿಪಡಿಸಿರುವ ದಂಡವನ್ನು ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಇದೇ ವೇಳೆ ಕೋವಿಡ್-19 3ನೇ ಅಲೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತಕ್ಕೆ ಸಹಕರಿಸುವಂತೆ ಕೋರಲಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700