ತಿಪಟೂರು: ನಗರದ ಗುರುಕುಲ್ ನಂದ್ ಆಶ್ರಮದಲ್ಲಿ ಮೇ 20 ರಂದು ಜಿಲ್ಲಾ ಮಟ್ಟದ ಮೂರನೇ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಹಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಸಮ್ಮೇಳನಾಧ್ಯಕ್ಷೆ ಡಾ.ಲೀಲಾ ಸಂಪಿಗೆ ಅವರನ್ನು ತಿಪಟೂರು ಗ್ರಾಮದೇವತೆ ಕೆಂಪಮ್ಮ ದೇವಾಲಯದಿಂದ, ನಗರದ ಪ್ರಮುಖ ರಸ್ತೆಯಲ್ಲಿ ನಂದಿದ್ವಜ ಮಂಗಳವಾದ್ಯ ಜಾನಪದ ಕಲಾ ತಂಡದೊಂದಿಗೆ ಮೆರವಣಿಗೆ ಮೂಲಕ ಮಹಿಳಾ ಸಾಹಿತ್ಯ ಸಮ್ಮೇಳನ ವೇದಿಕೆಗೆ ತರಲಾಗುವುದು. ಬಳಿಕ ನಾಡಿನ ಹಿರಿಯ ಸಾಹಿತಿ ನಾಡೋಜ ಕಮಲ ಹಂಪನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಕೇಂದ್ರ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಕಲ್ಪ ಜೋತಿ ಸಣ್ಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿಸುಧಾ ನರಸಿಂಹರಾಜು, ಕಿರುತೆರೆ ನಟಿ ಸುನಿತಾ ರಾವ್ ವೈ .ವಿ., ನಾರಾಯಣಸ್ವಾಮಿ, ಎಂಎಲ್ಸಿ ಎಂ ಚಿದಾನಂದಗೌಡ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸಾಹಿತ್ಯ ಸಮಾಜಸೇವೆ ಶಿಕ್ಷಣ ಕನ್ನಡ ಸೇವೆ ರಂಗಭೂಮಿ ಜಾನಪದ ಕೃಷಿಯಲ್ಲಿ ಸಾಧನೆ ಮಾಡಿದವರಿಗೆ 19 ಮಂದಿಯನ್ನು ಸನ್ಮಾನಿಸಲಾಗುವುದು. ಸುಮಾರು ಒಂದುವರೆ ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಬಸವರಾಜಪ್ಪ ಎಂ.ಬಿ.ಶಿವಕುಮಾರ್ ಸ್ವರ್ಣ ಗೌರಿ ಸರಸ್ವತಿ ಭೂಷಣ್ ಜಿಲ್ಲಾ ಕಾರ್ಯದರ್ಶಿ ಕಂಟಲಗೆರೆ ಸಣ್ಣ ಮಲ್ಲಯ್ಯ ಇದ್ದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


