ಬಳ್ಳಾರಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದ್ದು, 15 ದಿನಗಳ ಅಂತರದಲ್ಲಿ 3 ಬಾಣಂತಿಯರು ಬಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.
ಬಳ್ಳಾರಿ ತಾಲ್ಲೂಕಿನ ಕಕ್ಕಬೇವನಳ್ಳಿ ಗ್ರಾಮದ 25 ವರ್ಷದ ಗಂಗಮ್ಮ ಫೆಬ್ರವರಿ 14 ರಂದು ನಿಧನರಾಗಿದ್ದು, ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಗಂಗಮ್ಮ ಸಾವಾಗಿದೆ ಎಂಬ ಆರೋಪ ಕೇಳಿಬಂದಿದೆ.
ಗಂಗಮ್ಮ ಜನವರಿ 6 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಬಳಿಕ ಅವರನ್ನು ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಗೆ ದಾಖಲಿಸಲಾಗಿದೆ. ಸ್ವಲ್ಪ ಚೇತರಿಸಿಕೊಂಡ ನಂತರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಳಿಕ ಫೆಬ್ರವರಿ 14 ರಂದು ನಿಧನರಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4