ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿರುವುದಾಗಿ ವರದಿಯಾಗಿದೆ.
ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಆಗಮಿಸಿದ ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಡಿಆರ್ ಐ ಬೆಂಗಳೂರು ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು ಇಬ್ಬರಿಂದ 6 ಕೆಜಿ 834 ಗ್ರಾಂ ಚಿನ್ನ ಜಪ್ತಿ ಮಾಡಿ ತನಿಖೆ ಮುಂದುವರೆಸಲಾಗಿದೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


