ಸೆಪ್ಟೆಂಬರ್ 28 ರವರೆಗೆ ನಾಲ್ಕು ದಿನಗಳ ಕಾಲ ನಗರದ ಅರಮನೆ ಮೈದಾನದ ಆವರಣದಲ್ಲಿ ವಿಶ್ವ ಕಾಫಿ ಸಮ್ಮೇಳನ-2023 ನಡೆಯಲಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ 5ನೇ ವಿಶ್ವ ಕಾಫಿ ಸಮ್ಮೇಳನ ಏರ್ಪಾಡಾಗಿದೆ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ, ಕರ್ನಾಟಕ ಸರ್ಕಾರ ಮತ್ತು ಕಾಫಿ ಉದ್ಯಮದ ಸಹಯೋಗದೊಂದಿಗೆ ಸಮ್ಮೇಳನ ನಡೆಯಲಿದೆ.


