ಹಾಸನ: ಕೆಎಸ್ಆರ್ ಟಿಸಿ ಬಸ್, ಟ್ಯಾಂಕರ್, ಟಿಟಿ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ 9 ಜನ ಸಾವನ್ನಪ್ಪಿದ ಘಟನೆ ತಡರಾತ್ರಿಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹಳ್ಳಿಕೆರೆ ಗ್ರಾಮದ ಬಳಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮಕ್ಕಳು ಸೇರಿದಂತೆ 9 ಜನ ಸಾವನ್ನಪ್ಪಿದ್ದಾರೆ.
ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಿಟಿ ವಾಹನ ಟ್ಯಾಂಕರ್ ಓವರ್ ಟೇಕ್ ಮಾಡುವಾಗ ಎದುರಿನಿಂದ ಬಂದ ಕೆಎಸ್ಆರ್.ಟಿ.ಸಿ. ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


