ಬೆಂಗಳೂರು: ಸರ್ಕಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ ನೀಡಿರುವ ಸರ್ಕಾರದ ನಿಲುವುದನ್ನು ಬೆಂಬಲಿಸಬೇಕೆ ಅಥವಾ ವಿರೋಧಿಸ ಬೇಕೆ ಎನ್ನುವ ಬಗ್ಗೆ ಜೆಡಿಎಸ್ ಗೊಂದಲದಲ್ಲಿದೆ.
ಬಿಜೆಪಿ ಜೊತೆಗೆ ಮೈತ್ರಿಯಾಗಿರುವ ಹಿನ್ನೆಲೆ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಜೆಡಿಎಸ್ ಬೆಂಬಲಿಸಬೇಕೇ? ಬೇಡವೇ ಎನ್ನುವ ಬಗ್ಗೆ ಗೊಂದಲ ಸೃಷ್ಟಿಯಾಗಿದೆ.
ಇಂದು ನವದೆಹಲಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಸಚಿವ ಹೆಚ್.ಡಿ.ಕುಮಾರಸ್ವಾಮಿ ಪಕ್ಷದ ನಿಲುವನ್ನು ಸ್ಪಷ್ಟಪಡಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಮೀಸಲಾತಿ ಮಸೂದೆಯಲ್ಲಿ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆಯಿದೆ ಎನ್ನುವ ಅಭಿಪ್ರಾಯವಿದೆ.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ..ಬಿ ಸುರೇಶ್ ಬಾಬು ಅವರು ಮಾತನಾಡಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ 2 ಬಿ ಅಡಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಸಿಗುವಂತೆ ಮಾಡಿದ್ದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ. ಆದರೆ, ಚುನಾವಣೆ ವೇಳೆ ಆ ಸಮುದಾಯ ಪಕ್ಷಕ್ಕೆ ಬೆಂಬಲ ನೀಡಿಲ್ಲ. ಸೋಮವಾರ ದೇವೇಗೌಡ ಹಾಗೂ ಕುಮಾರಸ್ವಾಮಿ ಈ ಬಗ್ಗೆ ಚರ್ಚೆ ನಡೆಸಲಿದ್ದು, ನಂತರ ಪಕ್ಷದ ನಿಲುವನ್ನು ಸ್ಪಷ್ಟಪಡಿಸಲಿದ್ದಾರೆಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4