nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಬಿನಿ ಜಲಾಶಯಕ್ಕೆ 40 ಸಾವಿರ ಕ್ಯೂಸೆಕ್ ನೀರು: ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ
    ಜಿಲ್ಲಾ ಸುದ್ದಿ July 28, 2025

    ಕಬಿನಿ ಜಲಾಶಯಕ್ಕೆ 40 ಸಾವಿರ ಕ್ಯೂಸೆಕ್ ನೀರು: ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ

    By adminJuly 28, 2025No Comments3 Mins Read
    kabini

    ವರದಿ: ಹಾದನೂರು ಚಂದ್ರ

    ಸರಗೂರು:   ಕೇರಳದ ವಯನಾಡು, ಕಲ್ಪಿಟ್ಟ ಜಿಲ್ಲೆ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಬಾರಿ ಮಳೆ ಆಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದ ಭದ್ರತಾ ದೃಷ್ಟಿಯಿಂದ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದ ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಉಂಟಾಗಿದೆ.


    Provided by
    Provided by

    ವಯನಾಡ್ ಹಾಗೂ ಕಲ್ಪಿಟ್ಟ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ 60 ಮಿ.ಮೀಟರ್‌ಗೂ ಹೆಚ್ಚು ಮಳೆ ಆಗುತ್ತಿದ್ದು, ರೆಡ್ ಅಲರ್ಟ್ ಇದೆ. ಜತೆಗೆ ಕೇರಳ ಮತ್ತು ಕೊಡಗು ಜಿಲ್ಲೆಯ ಗಡಿ ಭಾಗದ ಪಾಪನಾಶಿನಿ ಹೊಳೆ ಪಾತ್ರದಿಂದ 30 ಸಾವಿರ ಕ್ಯೂಸೆಕ್‌ ಗಿಂತ ಹೆಚ್ಚು ನೀರು ಹರಿದುಬರುತ್ತಿದೆ. ಹಾಗಾಗಿ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಜಲಾಶಯ ಭರ್ತಿಗೆ ಕೇವಲ ಅರ್ಧ ಅಡಿ ಬಾಕಿ ಇದೆ.

    ಈಗಾಗಲೇ ಜಲಾಶಯದ ಮುಂಭಾಗದ ಸೇತುವೆ ಮುಳುಗಡೆ ಆಗಿ ಬೀಚನಹಳ್ಳಿ– ಬಿದರಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ಕಡಿತಗೊಂಡು ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳು ಸರಗೂರು ಮಾರ್ಗವಾಗಿ ಸಂಚರಿಸಬೇಕಾದ ಪರಿಸ್ಥಿತಿ ಇದೆ.

    ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿರುವುದರಿಂದ ತಾಲೂಕಿನ ಆಗುತ್ತೂರು ಹಾಗೂ ಕೆ.ಬೆಳ್ಳೂರು ಸೇತುವೆ ಮುಳುಗಡೆ ಆಗಿದೆ. 45 ಸಾವಿರ ಕ್ಯೂಸೆಕ್ ಬಿಟ್ಟರೆ ಹೊಮ್ಮರಗಳ್ಳಿ ಸೇತುವೆ ಮುಳುಗಡೆ ಆಗಲಿದೆ. ಬಹುತೇಕ ಭಾನುವಾರ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುವ ಸಾಧ್ಯತೆಯಿದೆ. ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟರೆ ನೂರಾರು ಗ್ರಾಮಗಳಿಗೆ ಸಂಪರ್ಕ ರಸ್ತೆ ಕಡಿತಗೊಳ್ಳಲಿದೆ.

    2019ರಲ್ಲಿ ಜಲಾಶಯಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬಂದು ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಟ್ಟಿದ್ದರಿಂದ ತಾಲೂಕಿನಲ್ಲಿ ಪ್ರವಾಹ ಉಂಟಾಗಿ ತಾಲೂಕಿನ ದೊಡ್ಡ ತುಂಬಸೋಗೆ ಸೇತುವೆ ಮುಳುಗಡೆ ಆಗಿ ಅನೇಕ

    ಕೇರಳದ ವಯನಾಡು ಮತ್ತು ಕಲ್ಪಪೆಟ್ಟಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದ್ದು, ಜಲಾಶಯದಿಂದ ಯಾವ ಸಂದರ್ಭದಲ್ಲಿ ಬೇಕಾದರೂ ಹೊರ ಹರಿವಿನ ಪ್ರಮಾಣ ಹೆಚ್ಚು ಮಾಡುವುದರಿಂದ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವಿ.

    ಗ್ರಾಮಗಳು ಪ್ರವಾಹಕ್ಕೆ ಸಿಲುಕಿ ಗ್ರಾಮಗಳ ನಡುವೆ ಸಂಪರ್ಕ ಕಡಿತಗೊಂಡಿದ್ದವು. ಬಿದರಹಳ್ಳಿ ವೃತ್ತದ ಗ್ರಾಮದ ಸುಮಾರು ನಲವತ್ತು ಮನೆಗಳು ನೀರಿನಲ್ಲಿ ಮುಳುಗಡೆ ಯಾಗಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟ ಉಂಟಾಗಿತ್ತು.

    ಅದೇ ರೀತಿ ಕಬಿನಿ ಹಿನ್ನೀರಿನ ಡಿ.ಬಿ. ಕುಪ್ಪೆ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಹಾಗೂ ಹಾಡಿಗಳು ನೀರಿನಲ್ಲಿ ಮುಳುಗಿದ್ದವು. ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತ ನಿರಾಶ್ರಿತರ ನೆರವಿಗೆ ಬಂದು ಆಶ್ರಯ ಕೇಂದ್ರಗಳನ್ನು ತೆರೆದು ಆಶ್ರಯ ಕಲ್ಪಿಸಿದರು. ಈಗಲೂ ಜನರು ಅದೇ ಆತಂಕದಲ್ಲಿ ಇರುವುದನ್ನು ಕಾಣಬಹುದಾಗಿದೆ.

    ಕಬಿನಿ ಜಲಾಶಯಕ್ಕೆ ಇದುವರೆಗೆ ಒಟ್ಟು 60 ಟಿಎಂಸಿ ನೀರು ಹರಿದು ಬಂದಿದ್ದು, 57 ಟಿಎಂಸಿಗೂ ಹೆಚ್ಚು ನೀರನ್ನು ನದಿ ಮೂಲಕ ತಮಿಳುನಾಡಿಗೆ ಹರಿಸಲಾಗಿದೆ. ತಮಿಳುನಾಡು ರಾಜ್ಯಕ್ಕೆ ಒಪ್ಪಂದದಂತೆ ಬಹುತೇಕ ನೀರು ಕಬಿನಿ ಜಲಾಶಯ ಒಂದರಲ್ಲೇ ಬಿಡಲಾಗಿದೆ.

    ಈಗಾಗಲೇ ಮಾದಾಪುರ ಚಕ್ಕೂರು ಗ್ರಾಮ ಮಾರ್ಗವಾಗಿ ವಿವಿಧ ಗ್ರಾಮಗಳಿಗೆ ತೆರಳುವ ಸೇತುವೆ ಹಾಗೂ ಅಗತ್ತೂರು ಮಾರ್ಗವಾಗಿ ಬಿದರಹಳ್ಳಿ ಮಾರ್ಗ ಸೇತುವೆ ಮುಳುಗಡೆ ಗೊಂಡಿದೆ ರಿಂದ ಸರಗೂರು ಪೋಲಿಸ್ ಠಾಣೆ ಅಧಿಕಾರಿಗಳು ಮುಂಜಾಗ್ರತೆ ಯಾಗಿ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ ನದಿಯ ದಡದಲ್ಲಿ ಇರುವ ಸಾರ್ವಜನಿಕರು ಹಾಗೂ ಜಾನುವಾರುಗಳನ್ನು ಬಿಡಬೇಡಿ ಎಂದು ನದಿಯ ದಡದಲ್ಲಿ ಗ್ರಾಮಗಳ ಮುಖಂಡರು ಮಾಹಿತಿಯನ್ನು ನೀಡಲಾಗಿದೆ ಎಂದು ಉಪ ನಿರೀಕ್ಷಕ ಆರ್ ಕಿರಣ್ ತಿಳಿಸಿದರು.

    ಇನ್ನೂ ಸರಗೂರು ಪಟ್ಟಣದಿಂದ ಸಾಗರೆ ಗ್ರಾಮ ಮಾರ್ಗವಾಗಿ ಹೋಗುವ ರಸ್ತೆ ಮುಳುಗಡೆವಾಗುವ ಹಂತದಲ್ಲಿ ಇದೆ ಬಸ್ ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದರು.

    ಎನ್ ಬೇಗೂರು ಗೆಂಡತ್ತೂರು ಕೆಂಚನಹಳ್ಳಿ ಗ್ರಾಮಗಳಿಗೆ ಹೋಗುವ ರಸ್ತೆಗಳು ಮುಳುಗಡೆ ಗೊಂಡಿದರಿಂದ ಅ ಭಾಗದ ಜನರಿಗೆ ಸಂಚಾರ ತೊಂದರೆಯಾಗದಂತೆ ನೋಡಿಕೊಳ್ಳಲು ಪೋಲಿಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕಂದೇಗಾಲ ಮಾರ್ಗವಾಗಿ ಗೆದ್ದೇ ಹುಂಡಿ ಗ್ರಾಮದಿಂದ ನಂದಿನಾಥಪುರ ಮಾರ್ಗವಾಗಿ ಹೋಗುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

    ಉಷಾ, ಕಬಿನಿ ಜಲಾಶಯ ಕಾರ್ಯಪಾಲಕ ಅಭಿಯಂತರರು.


    ಕೇರಳದ ವಯನಾಡು ಮತ್ತು ಕಲ್ಪಪೆಟ್ಟಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದ್ದು, ಜಲಾಶಯದಿಂದ ಯಾವ ಸಂದರ್ಭದಲ್ಲಿ ಬೇಕಾದರೂ ಹೊರ ಹರಿವಿನ ಪ್ರಮಾಣ ಹೆಚ್ಚು ಮಾಡುವುದರಿಂದ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವಿ.

    ಗಣೇಶ್, ಎಇಇ ಕಬಿನಿ ಜಲಾಶಯ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.