ವಿಶ್ವ ಯೋಗ ದಿನಾಚರಣೆ ಪ್ರಯುಕ್ತ 400ಕ್ಕೂ ಹೆಚ್ಚು ಯೋಗಾಪಟುಗಳಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯೋಗಾಭ್ಯಾಸ ನಡೆಯಿತು.
ಈ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಇಂಟರ್ನ್ಯಾಷನಲ್ ನ್ಯಾಚುರೋಪತಿ ಆರ್ಗನೈಸೇಶನ್ ಮಂಜುನಾಥ್ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ಮಾನವೀಯತೆಗಾಗಿ ಯೋಗ ಎಂಬ ಶೀರ್ಷಿಕೆಯಡಿ ಯೋಗಾಭ್ಯಾಸ ಮಾಡಲಾಯಿತು.
ಪತಾಂಜಲಿ ಯೋಗ ಶಿಕ್ಷಣ ಸಮಿತಿ ನೇತೃತ್ವ ವಹಿಸಿತ್ತು. ನಗರ ಶಾಸಕ ಜ್ಯೋತಿಗಣೇಶ್ ಮತ್ತು ಹಲವು ಸಂಸ್ಥೆಗಳಾದ ಆರೋಗ್ಯ ಭಾರತಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ರಾಷ್ಟ್ರೀಯ ಮಾನವ ಪರಿಸರ ರಕ್ಷಣಾ ಪಡೆ ಪಟುಗಳು ಹಾಗೂ ನಗರದ ವೃದ್ಧರು, ವಿದ್ಯಾರ್ಥಿಗಳು, ಮಕ್ಕಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz