ನವದೆಹಲಿ: ಪೊಲೀಸ್ ತರಬೇತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 450 ಕ್ಕೂ ಅಧಿಕ ವಾಹನಗಳು ಸುಟ್ಟು ಹೋಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಇಲಾಖೆ ತಿಳಿಸಿದೆ.
ಮಧ್ಯರಾತ್ರಿ 12.30 ಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಸತತ ಕಾರ್ಯಾಯರಣೆಯಿಂದಾಗಿ, ಬೆಳಗ್ಗೆ 4 ಗಂಟೆಗೆ ಬೆಂಕಿ ಹತೋಟಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ತಿಳಿದು ಬಂದಿಲ್ಲ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


