ತುಮಕೂರು: ಸರ್ಕಾರಿ ಶಾಲೆಯಲ್ಲಿ ವಿತರಣೆ ಮಾಡುವ ಚಿಕ್ಕಿ (ಕಡಲೆಮಿಠಾಯಿ) ತಿಂದು ಶಾಲಾ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡುಬಂದಿರುವ ಘಟನೆ ಪಾವಗಡ ತಾಲೂಕಿನ ನಿಡಗಲ್ ಹೋಬಳಿಯ ಕೋಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದಿದೆ.
ಸುಮಾರು 46 ವಿದ್ಯಾರ್ಥಿಗಳಿಗೆ ಕಾಣಿಸಿಕೊಂಡ ವಾಂತಿ, ಮಧ್ಯಾಹ್ನ ಊಟದ ಜೊತೆಗೆ ಕೊಡುವ ಚಿಕ್ಕಿ ತಿಂದಾಗ ನಡೆದಿದೆ. ಕೂಡಲೇ ಮಕ್ಕಳನ್ನ ಪಾವಗಡ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಪಾವಗಡ ತಹಶಿಲ್ದಾರ್ ವರದರಾಜು, ಬಿಇಓ ಇಂದ್ರಣಮ್ಮ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿ ಮಾಹಿತಿ ಪಡೆದ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx