ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್ಐ) ಮಹಿಳಾ ಹಾಸ್ಟೆಲ್ ನಲ್ಲಿ ತಂಗಿದ್ದ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್ ನಲ್ಲಿ 29 ವಿದ್ಯಾರ್ಥಿನಿಯರು, ಐವರು ಎಚ್ ಬ್ಲಾಕ್ ನಲ್ಲಿ ಹಾಗೂ ನಾಲ್ವರು ತುರ್ತು ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ. ವಿದ್ಯಾರ್ಥಿನಿಯರು ವಾಂತಿ, ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.
ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿಯರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಲು ಕಾರಣ ಇನ್ನೂ ನಿಗೂಢವಾಗಿದ್ದು ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296