ನವದೆಹಲಿ: ಪುಣೆಯ ನವಲೆ ಸೇತುವೆಯಲ್ಲಿ ಭಾನುವಾರ ಟ್ಯಾಂಕರ್ವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, 30 ಮಂದಿ ಗಾಯಗೊಂಡಿದ್ದಾರೆ.
ಈ ಘಟನೆ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪುಣೆ ಸಮೀಪದ ನವಲೆ ಬ್ರಿಡ್ಜ್ನಲ್ಲಿ ನಡೆದಿದೆ. ಅಪಘಾತದಲ್ಲಿ 48 ವಾಹನಗಳು ಜಖಂಗೊಂಡಿವೆ ಎಂದು ಪುಣೆ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಟ್ಯಾಂಕರ್‌ನ ಬ್ರೇಕ್ ವಿಫಲವಾಗಿದ್ದು, ಟ್ಯಾಂಕರ್ ಚಾಲಕನ ನಿಯಂತ್ರಣಕ್ಕೆ ಬಾರದೇ ಮತ್ತು ರಸ್ತೆಯಲ್ಲಿ ತೈಲ ಚೆಲ್ಲಿದ ಕಾರಣ ಅದು ಜಾರುವಂತಾಗಿ ಒಂದಕ್ಕೊಂದು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮುಂಬೈಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, 2 ಕಿ.ಮೀ.ಗೂ ಹೆಚ್ಚು ಜಾಮ್ ಉಂಟಾಗಿದೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz