5 ಮತ್ತು 8ನೇ ತರಗತಿ ಬೋರ್ಡ್ ಎಕ್ಸಾಮ್ ರದ್ಧು ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ಮುಂದೂಡಿದೆ.
ರಾಜ್ಯ ಸರ್ಕಾರದ 5 ಮತ್ತು 8ನೇ ತರಗತಿ ಬೋರ್ಡ್ ಎಕ್ಸಾಮ್ ಆದೇಶವನ್ನ ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿತ್ತು. ಇದನ್ನ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ನರೇಂದರ್ ಮತ್ತು ನ್ಯಾ. ಅಶೋಕ್ ಅವರ ನೇತೃತ್ವದ ವಿಭಾಗೀಯ ಪೀಠ, ಈ ಸಂಬಂಧ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಮಾಣ ಪತ್ರ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನ ನಾಳೆಗೆ ಮುಂದೂಡಿತು.
ಸರ್ಕಾರ ಪರವಾಗಿ ಎಎಜಿ ವಾದ ಮಂಡನೆ ಮಾಡಿದರು. ಸರ್ಕಾರದ5 ಮತ್ತು 8ನೇ ತರಗತಿ ಬೋರ್ಡ್ ಎಕ್ಸಾಮ್ ಆದೇಶ ರದ್ದುಪಡಿಸುವಂತೆ ಕೋರಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸರ್ಕಾರದ ಆದೇಶವನ್ನ ರದ್ದುಪಡಿಸಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


