ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲೀಕರು ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ, ನೀರಿನ ಶುಲ್ಕ ಹಾಗೂ ಯುಜಿಡಿ ಶುಲ್ಕಗಳನ್ನು ಪಾವತಿಸುವ ಮೂಲಕ ಆಸ್ತಿ ತೆರಿಗೆಯ ಮೇಲೆ ಶೇ.5ರಷ್ಟು ತೆರಿಗೆ ರಿಯಾಯಿತಿ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.
ಮಾಲೀಕರು 2025–26ನೇ ಸಾಲಿಗೆ ಸಂಬಂಧಿಸಿದಂತೆ ತಮ್ಮ ಆಸ್ತಿ ತೆರಿಗೆ, ನೀರಿನ ಶುಲ್ಕ ಹಾಗೂ ಯುಜಿಡಿ ಶುಲ್ಕಗಳನ್ನು ನಗದು ಪಾವತಿ ಕೌಂಟರ್/ ಕರ್ನಾಟಕ ಒನ್ ಕೇಂದ್ರ/ ಆನ್ಲೈನ್(ವೆಬ್ಸೈಟ್ ವಿಳಾಸ: www.tumakurucitycorp.org) ಮೂಲಕ ಅಥವಾ ವಾರ್ಡ್ ಬಿಲ್ ಕಲೆಕ್ಟರ್ಗಳಿಗೆ ನೇರವಾಗಿ ಪಾವತಿಸಿ ರಸೀದಿ ಪಡೆಯಬಹುದಾಗಿದೆ. ಮಹಾ ನಗರಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರು ಈ ಸದವಕಾಶದ ಪ್ರಯೋಜನ ಪಡೆಯಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4