ಸರಗೂರು: ರಾಜ್ಯದ ಮೂರು ಕಡೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರದ ಸಾಧನೆಗೆ ರಾಜ್ಯದ ಜನತೆ ಬೆಂಬಲಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ನಾಗರಾಜು ಸಂಭ್ರಮ ವ್ಯಕ್ತಪಡಿಸಿದರು.
ತಾಲೂಕಿನ ಪಟ್ಟಣದ ಪಂಚಾಯಿತಿ ಮುಂಭಾಗದಲ್ಲಿ ಶನಿವಾರ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಸಾಧಿಸಿದ ಅಂಗವಾಗಿ ಪಟಾಕಿ ಸಿಡಿಸಿ ಸಂಭ್ರಮಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜೆಡಿಎಸ್ ಸಮಬಲ ಹೋರಾಟಕ್ಕೆ ಸಜ್ಜಾಗಿ ನಿಂತಿದ್ದವು. ಚುನಾವಣೆ ಪೂರ್ವ ಸಮೀಕ್ಷೆಗಳು ಒಂದೊಂದು ಕ್ಷೇತ್ರದ ಸಮೀಕ್ಷೆಗಳನ್ನು ಡೋಲಾಯಮಾನವಾಗಿ ಬಿಂಬಿಸಿದ್ದವು. ಆದರೆ ಅವೆಲ್ಲವುಗಳನ್ನು ತಲೆ ಕಳಗಾಗಿಸಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನೇತಾರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರ ನೇತೃತ್ವದಲ್ಲಿ ಮತ್ತು ಡಿ.ಕೆ.ಶಿವಕುಮಾರ್ ಅವರ ಸೋದರ ಡಿ.ಕೆ.ಸುರೇಶ್ ಅವರ ನಿರ್ದೇಶನದಲ್ಲಿ ಚುನಾವಣೆ ಎದುರಿಸಲಾಯಿತು. ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ನ ಕೈ ಹಿಡಿದಿದೆ ಎಂದರು.
ಈ ಸಂದರ್ಭದಲ್ಲಿ ಪ.ಪಂ. ಸದಸ್ಯ ಶ್ರೀನಿವಾಸ, ಚೆಲುವ ಕೃಷ್ಣ,ವರ್ತಕ ಸಂಘದ ಮಾಜಿ ಬ್ರಮ್ಮದೇವಯ್ಯ, ಎಸ್.ಬಿ.ನಾಗರಾಜು, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಚೆಲುವರಾಜು, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಂ. ಕೆಂಡಗಣಸ್ವಾಮಿ, ಗುತ್ತಿಗೆದಾರ ಬಸವರಾಜು, ರಸ್ತೆ ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಹದೇವ್ ಆಟೋ ಚಾಲಕರ ಸಂಘ ಅಧ್ಯಕ್ಷ ಸಾಹಿದ್ ವಸಿಮ್, ಲೋಡಸ್ಸ್ ಸಂಘದ ಅಧ್ಯಕ್ಷ ಗೋಪಾಲಯ್ಯ, ಮುಖಂಡರು ಮುಕ್ತಿ,ಅಮೀರಾಪಾಷಾ, ಮಹೇಶ್, ರಂಗಸ್ವಾಮಿ, ಸಿದ್ದರಾಜು, ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q