ಹುಬ್ಬಳ್ಳಿ,: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪಟ್ಟ ಇಬ್ಬರು ಅಯ್ಯಪ್ಪ ಭಕ್ತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಗುರುವಾರ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ ಎಂದು ಸಚಿವ ಲಾಡ್ ತಿಳಿಸಿದರು.
ಇತರ 7 ಮಂದಿ ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಒಬ್ಬ ಬಾಲಕ ಚೇತರಿಸಿಕೊಂಡಿದ್ದಾನೆ. ಕುಟುಂಬದವರ ಜೊತೆಗೆ ಚರ್ಚಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx