ಬೆಂಗಳೂರು: ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಭ್ರಷ್ಟರು ಬಿದ್ದಿದ್ದಾರೆ. ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮತ್ತು ಪಿಎಸ್‌ಐ ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದವರು ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ವಜ್ರಮುನಿ ಮತ್ತು ಪಿಎಸ್‌ಐ ರಮ್ಯಾ ಎಂದು ತಿಳಿದು ಬಂದಿದೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್‌ಪೆಕ್ಟರ್ ರಮ್ಯ ಅವರು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಆತನನ್ನು ತಮ್ಮ ವಶದಿಂದ ಬಿಡಲು ಐದು ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಇದರಲ್ಲಿ ಆಗಲೇ ಐವತ್ತು ಸಾವಿರ ರೂ. ಮೊದಲು ಪಡೆದುಕೊಂಡಿದ್ದರು. ಎರಡನೇ ಕಂತಾಗಿ ಒಂದು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಕುರಿತು ವಂಚನೆ ಆರೋಪಿಯ ಕಡೆಯವರು ಎರಡನೇ ಕಂತು ಕೊಡುವ ಮುನ್ನ ಲೋಕಾಯುಕ್ತರಿಗೆ ಮಾಹಿತಿ ನೀಡಿದ್ದರು. ದೂರಿನ ಹಿನ್ನೆಲೆ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


