ಬೀದರ್ ಜಿಲ್ಲೆಯಲ್ಲಿ ನೀರುಪಾಲಾದ ಇಬ್ಬರಿಗೆ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ವಿತರಿಸಲಾಗಿದೆ. ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಮೃತರ ಪತ್ನಿಯರಿಗೆ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು 5 ಲಕ್ಷದ ಚೆಕ್ ನೀಡಿದರು.
ಸೋಮವಾರ 1 ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಗೆ ಕಾರಂಜಾ ನದಿಗೆ ಹೆಚ್ಚಿನ ನೀರು ಹರಿದು ಬಂದು ಇಬ್ಬರು ಕೊಚ್ಚಿ ಹೊಗಿದ್ದಾರೆ.
ಸೇತುವೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಹುಮ್ನಾಬಾದ್ ತಾಲೂಕಿನ ಜಲಸಂಗಿ ಗ್ರಾಮದ ತುಕಾರಾಮ ಲಕ್ಷ್ಮಣ (40), ಘಾಟಬೋರಾಳದ ತಿಪ್ಪಣ್ಣ ವಿಶ್ವನಾಥ್ (33) ನೀರುಪಾಲಾಗಿದ್ದಾರೆ. ಭಾಲ್ಕಿ ತಾಲೂಕಿನ ಮರೂರು ಗ್ರಾಮದ ಕಾರಂಜಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರು ಸೇತುವೆ ಮೇಲೆ ದ್ವಿಚಕ್ರದ ಮೇಲೆ ತೆರಳುತ್ತಿದ್ದ ಇಬ್ಬರು ನೀರುಪಾಲಾಗಿದ್ದಾರೆ. ಈ ಕುರಿತು ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


