ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್ ಎಸ್ಎಲ್ ಸಿ ಮಾದರಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವ ಉದ್ದೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್ ಎಸ್ಎಲ್ ಸಿ ಮಾದರಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವ ಉದ್ದೇಶವಿಲ್ಲ. ಆದರೆ ಪರ್ಯಾಯ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
ಪರ್ಯಾಯವಾಗಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಇದು ಎಸ್ಎಸ್ ಎಲ್ ಸಿ ಮಾದರಿಯ ಬೋರ್ಡ್ ಪರೀಕ್ಷೆ ಆಗಿರುವುದಿಲ್ಲ. ಅಕ್ಟೋಬರ್ 13 ರಂದು ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


