ಚಂಡೀಗಢ: ಪಂಜಾಬ್ ನ ಜಲಂಧರ್ ನಲ್ಲಿ ಒಂದೇ ಕುಟುಂಬದ 5 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 59 ವರ್ಷದ ಮನ್ ಮೋಹನ್ ಸಿಂಗ್, ಅವರ ಪತ್ನಿ, ಇಬ್ಬರು ಮಕ್ಕಳು, ಮೂರು ವರ್ಷದ ಮೊಮ್ಮಗಳ ಶವ ಪತ್ತೆಯಾಗಿದೆ.
ಮನಮೋಹನ್ ಅವರ ಶವ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇತರರ ಮೃತದೇಹ ಅದೇ ಕೋಣೆಯಲ್ಲಿ ಹಾಸಿಗೆಯ ಮೇಲೆ ಪತ್ತೆಯಾಗಿದೆ.
ಮನಮೋಹನ್ ಸಿಂಗ್ ಅವರು ಬರೆದಿರುವ ಆತ್ಮಹತ್ಯೆ ಪತ್ರದಲ್ಲಿ ಕೆಲವು ಹಣಕಾಸಿನ ಸಮಸ್ಯೆಗಳಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವುದಾಗಿ ಬರೆದಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಜಲಂಧರ್ (ಗ್ರಾಮೀಣ) ಮುಖವಿಂದರ್ ಸಿಂಗ್ ಭುಲ್ಲರ್ ಹೇಳಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಮನಮೋಹನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಕುಟುಂಬದ ಸದಸ್ಯರನ್ನು ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.


