ಲೋನಾವಾಲಾದ ಭೂಶಿ ಅಣೆಕಟ್ಟಿನ ನೀರಿನಲ್ಲಿ ಕೊಚ್ಚಿ ಹೋಗಿ ನಾಲ್ವರು ಮಕ್ಕಳು ಮತ್ತು ಮಹಿಳೆ ಸೇರಿದಂತೆ ಐದು ಜನರು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದು, ಇನ್ನೂ ಐವರು ಈಜಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ.
ಭಾನುವಾರ ಪುಣೆಯ ಹಡಪ್ಸರ್ ನ ಲಿಯಾಕತ್ ಅನ್ಸಾರಿ ಮತ್ತು ಯೂನಸ್ ಖಾನ್ ಅವರ ಕುಟುಂಬ ಸದಸ್ಯರು ಭೂಶಿ ಅಣೆಕಟ್ಟಿಗೆ ಭೇಟಿ ನೀಡಿದ್ದರು. ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಏಕಾಏಕಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ 10 ಮಂದಿ ಕುಟುಂಬದವರು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ಐವರು ಈಜಿ ಪ್ರಾಣ ಕಾಪಾಡಿಕೊಂಡಿದ್ದು, 5 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಮಾಹಿತಿಯ ಪ್ರಕಾರ, ಮೃತರನ್ನು ಸಹಿಸ್ತಾ ಲಿಯಾಕತ್ ಅನ್ಸಾರಿ (36), ಅಮಿಮಾ ಆದಿಲ್ ಅನ್ಸಾರಿ (13), ಉಮೇರಾ ಅಲಿಯಾಸ್ ಸಲ್ಮಾನ್ ಆದಿಲ್ ಅನ್ಸಾರಿ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೂ ಇಬ್ಬರು ಕಾಣೆಯಾಗಿದ್ದಾರೆ. ನಾಪತ್ತೆಯಾದವರನ್ನು ಅದ್ನಾನ್ ಶಾಬತ್ ಅನ್ಸಾರಿ (4), ಮತ್ತು ಮರಿಯಾ ಅನ್ಸಾರಿ (9) ಎಂದು ಗುರುತಿಸಲಾಗಿದ್ದು, (ಸೋಮವಾರ) ಶೋಧ ಕಾರ್ಯಾಚರಣೆ ಮುಂದುವರಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA