ತುಮಕೂರು: ಮೇಕೆ ಮರಿ ಕೊಡುವುದಾಗಿ 5 ವರ್ಷದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ತುಮಕೂರಿನ ಗೌರವಾನ್ವಿತ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(ಪೋಕ್ಸೋ)ವು 10 ವರ್ಷ ಜೈಲು ಶಿಕ್ಷೆ ಹಾಗೂ 1.10 ಲಕ್ಷ ರೂಪಾಯಿ ದಂಡ ವಿಧಿಸಿದೆ.
2021ರಲ್ಲಿ ಈ ಘಟನೆ ನಡೆದಿತ್ತು. ನೊಂದ ಬಾಲಕಿಯ ತಾಯಿ ತನ್ನ ಎರಡನೇ ಮಗುವಿನ ಬಾಣಂತನಕ್ಕೆ ಪಾವಗಡ ತಾಲೂಕಿನ ಓಬಾಳಪುರ ಗ್ರಾಮಕ್ಕೆ ಆಗಮಿಸಿದ್ದರು. ದಿನಾಂಕ 13—01—2022ರಂದು ಬೆಳಗ್ಗೆ ಸುಮಾರು 10 ಗಂಟೆಗೆ ನೊಂದ ಬಾಲಕಿಯು ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದಳು. ಈ ವೇಳೆ ಕಾವಲಪ್ಪ(45) ಎಂಬಾತ ಮೇಕೆ ಮರಿಕೊಡಿಸುವುದಾಗಿ ಕರೆದೊಯ್ದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.
ಈ ಪ್ರಕರಣದ ತನಿಖಾಧಿಕಾರಿ ಎಸ್.ಆರ್.ಕಾಂತರೆಡ್ಡಿ ಅವರು ಪೋಕ್ಸೋ ಕಾಯ್ದೆಯಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದರು. ವಿಚಾರಣೆಯಲ್ಲಿ ಅಪರಾಧಿಯ ಕೃತ್ಯ ಸಾಬೀತಾದ ಕಾರಣ, ನ್ಯಾಯಾಧೀಶರಾದ ಸಂಧ್ಯಾ ರಾವ್ ಪಿ., ಅವರು ಅಪರಾಧಿ ಕಾವಲಪ್ಪನಿಗೆ 10 ವರ್ಷ ಜೈಲುಶಿಕ್ಷೆ 1.10 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದರು.
ಇನ್ನೂ ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 50 ಸಾವಿರ ರೂಪಾಯಿ ಪರಿಹಾರ ಮತ್ತು ಅಪರಾಧಿಗೆ ವಿಧಿಸಿರುವ ದಂಡದಲ್ಲಿ 1.5 ಲಕ್ಷ ರೂಪಾಯಿ ಸೇರಿ ಒಟ್ಟು 1 ಲಕ್ಷದ 55 ಸಾವಿರ ರೂಪಾಯಿ ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ವಾದ ಮಂಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA