ಅಧಿಕೃತ ಅಂಕಿ ಅಂಶಗಳ ಪ್ರಕಾರ ಗುಜರಾತ್ ನಲ್ಲಿ ಐದು ವರ್ಷಗಳಲ್ಲಿ 40,000 ಕ್ಕೂ ಹೆಚ್ಚು ಮಹಿಳೆಯರು ನಾಪತ್ತೆಯಾಗಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ, 2016 ರಲ್ಲಿ 7,105, 2017 ರಲ್ಲಿ 7,712, 2018 ರಲ್ಲಿ 9,246 ಮತ್ತು 2019 ರಲ್ಲಿ 9,268 ಮಹಿಳೆಯರು ನಾಪತ್ತೆಯಾಗಿದ್ದಾರೆ.
2020 ರಲ್ಲಿ ಗುಜರಾತ್‌ನಿಂದ 8,290 ಮಹಿಳೆಯರು ನಾಪತ್ತೆಯಾಗಿದ್ದಾರೆ. ಈ ಐದು ವರ್ಷಗಳಲ್ಲಿ 41,621 ಮಹಿಳೆಯರು ರಾಜ್ಯದಿಂದ ನಾಪತ್ತೆಯಾಗಿದ್ದಾರೆ ಎಂದು NCRB ಅಂಕಿ ಅಂಶಗಳು ತೋರಿಸುತ್ತವೆ. 2021 ರಲ್ಲಿ, ರಾಜ್ಯ ಸರ್ಕಾರವು ಅಹಮದಾಬಾದ್ ಮತ್ತು ವಡೋದರಾದಲ್ಲಿ ಒಂದು ವರ್ಷದಲ್ಲಿ (2019 ರಿಂದ 2020) 4,722 ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ವಿಧಾನಸಭೆಯಲ್ಲಿ ಹೇಳಿಕೆ ನೀಡಿತ್ತು. ಇಂತಹ ನಾಪತ್ತೆಯಾದ ಮಹಿಳೆಯರ ಬಗ್ಗೆ ತನಿಖೆ ನಡೆಸಿದಾಗ ಕೆಲವರು ವೇಶ್ಯಾವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ ಎಂದು ಮಾಜಿ ಐಪಿಎಸ್ ಅಧಿಕಾರಿ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸುಧೀರ್ ಸಿನ್ಹಾ ಹೇಳಿದ್ದಾರೆ.
ಮಹಿಳಾ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದಿರುವುದು ಪೊಲೀಸ್ ವ್ಯವಸ್ಥೆಯ ಸಮಸ್ಯೆಯಾಗಿದೆ. ಇಂತಹ ಪ್ರಕರಣಗಳು ಕೊಲೆಗಿಂತ ಗಂಭೀರವಾಗಿದೆ. ಇಂತಹ ಘಟನೆಗಳನ್ನು ಕೊಲೆ ಪ್ರಕರಣದಷ್ಟೇ ಗಂಭೀರವಾಗಿ ತನಿಖೆ ನಡೆಸಬೇಕು ಎಂದರು. ನಾಪತ್ತೆಗಳ ಹಿಂದೆ ಮಾನವ ಕಳ್ಳಸಾಗಣೆ ಅಡಗಿದೆ ಎಂದು ಮಾಜಿ ಎಡಿಜಿಪಿ ಡಾ. ರಾಜನ್ ಪ್ರಿಯದರ್ಶಿ ಹೇಳಿದರು. ಇದೇ ವೇಳೆ, ಬಿಜೆಪಿ ನಾಯಕರು ಕೇರಳದ ಮಹಿಳೆಯರ ಬಗ್ಗೆ ಮಾತನಾಡುತ್ತಿದ್ದಾರೆ ಮತ್ತು ಪ್ರಧಾನಿ ಮತ್ತು ಗೃಹ ಸಚಿವರ ತವರು ರಾಜ್ಯವಾದ ಗುಜರಾತ್‌ನಲ್ಲಿ 40,000 ಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದಾರೆ ಎಂದು ಗುಜರಾತ್ ಕಾಂಗ್ರೆಸ್ ವಕ್ತಾರ ಹಿರೇನ್ ಬ್ಯಾಂಕರ್ ಆರೋಪಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


