ಬೀದರ್: ನಗರದ ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಭಾರಿ ಪ್ರಮಾಣದ ₹50 ಕೋಟಿ ಅನುದಾನ ಮಂಜೂರು ಮಾಡಿಸಿರುವ ರಾಜ್ಯದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ದಲಿತ ಸಮುದಾಯದ ವತಿಯಿಂದ ಬೃಹತ್ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.
ನವೆಂಬರ್ 1ರಂದು ಬೆಳಿಗ್ಗೆ 11 ಗಂಟೆಗೆ ಬೀದರ್ನ ನಗರದ ಪ್ರಸಿದ್ಧ ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಈ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ನೆರವೇರಲಿದೆ.
ಈ ಕುರಿತು ಔರಾದ್ ತಾಲೂಕಿನ ಮುಖಂಡ ತುಕಾರಾಮ ಹಸನ್ಮುಖಿ ಪತ್ರಿಕಾ ಪ್ರಕಟಣೆ ನೀಡಿದ್ದು, “ಅಂಬೇಡ್ಕರ್ ಅಧ್ಯಯನ ಕೇಂದ್ರದ ಅಭಿವೃದ್ಧಿಗೆ ದೊಡ್ಡ ಪ್ರಮಾಣದ ನೆರವು ನೀಡಿದ ಸಚಿವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಹೀಗಾಗಿ ಔರಾದ್ ತಾಲೂಕಿನ ಸಾರ್ವಜನಿಕರು, ವಿವಿಧ ಸಮಾಜದ ಮುಖಂಡರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದ್ದಾರೆ.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
