ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿಯು ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಫರ್ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ. ಒಬ್ಬೊಬ್ಬರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದೆ. ಆದರೆ ಕಾಂಗ್ರೆಸ್ ನ ಶಾಸಕರು ಯಾರು ಇದಕ್ಕೆ ಬಗ್ಗಿಲ್ಲ ಎಂದರು.
ಕಾಂಗ್ರೆಸ್ ಗೆ 136 ಸ್ಥಾನವಿದ್ದರೂ ಬಿಜೆಪಿ ಸರ್ಕಾರ ಅಲ್ಲಾಡಿಸಲು ಪ್ರಯತ್ನ ಪಡುತ್ತಿದೆ. ಬಿಜೆಪಿಗೆ ಸರ್ಕಾರಗಳನ್ನ ಬೀಳಿಸುವುದು ಅಭ್ಯಾಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ. ದೇಶದ ಬೇರೆ ಬೇರೆ ಭಾಗಗಳಲ್ಲಿ ಸರ್ಕಾರ ಅಂತಂತ್ರ ಮಾಡುವ ರೀತಿ ಕರ್ನಾಟಕದಲ್ಲೂ ನಡೆದಿರುವುದು ಸತ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


