ಪ್ರಪಂಚದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ದಂಪತಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಕ್ಕೆ ದಿನ ಗಣನೆ ಆರಂಭವಾಗಿದೆ. ವಿವಾಹದ ತಯಾರಿಯಂತೂ ಭರ್ಜರಿಯಾಗೇ ನಡೆಯುತ್ತಿದೆ. ಈ ನಡುವೆ ಅಂಬಾನಿ ಕುಟುಂಬ ಮಹತ್ತರವಾದ ಕಾರ್ಯವೊಂದನ್ನು ಮಾಡಿದೆ.
ಜುಲೈ 12ರಂದು ಮುಂಬೈಯಲ್ಲಿ ಅನಂತ್ ಅಂಬಾನಿ ಮದುವೆ ನಡೆಯಲಿದ್ದು ಅದ್ಧೂರಿ ಸಮಾರಂಭ ಆಯೋಜಿಸಲಾಗಿದೆ. ಅದಕ್ಕೆ ಮುನ್ನುಡಿಯಾಗಿ ಜುಲೈ 2ರಂದು ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಸುಮಾರು 50 ಬಡ ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿ ಮಾದರಿಯಾಗಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಪ್ರದೇಶದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಐವತ್ತಕ್ಕೂ ಹೆಚ್ಚು ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಈ ಸಾಮೂಹಿಕ ವಿವಾಹವಾದ ಬಳಿಕ ನವ ವಧು-ವರರಿಗೆ ಅಂಬಾನಿ ಕುಟುಂಬ ಏನೆಲ್ಲಾ ಉಡುಗೊರೆ ನೀಡಿತು, ಕೊಟ್ಟ ಚಿನ್ನ-ಬೆಳ್ಳಿ ಎಷ್ಟು, ಹಣವೆಷ್ಟು ಎಂದು ಕೇಳಿದರೆ ನೀವೇ ಶಾಕ್ ಆಗುತ್ತೀರಾ!! ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.
ಈ ಸಾಮೂಹಿಕ ವಿವಾಹದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಪ್ರತಿ ಜೋಡಿಗೂ ಮಂಗಳ ಸೂತ್ರ, ಮದುವೆಯ ಉಂಗುರಗಳು, ಮೂಗುತಿ ಸೇರಿದಂತೆ ಚಿನ್ನಾಭರಣಗಳನ್ನು ನೀಡಲಾಯಿತು. ಜೊತೆಗೆ ಕಾಲುಂಗುರ, ಕಾಲ್ಗೆಜ್ಜೆಯಂಥ ಬೆಳ್ಳಿ ಆಭರಣಗಳನ್ನು ಸಹ ನೀಡಲಾಯಿತು. ಇದರ ಜತೆಗೆ ಪ್ರತಿ ವಧುವಿಗೆ 1.01 ಲಕ್ಷ ರೂ. ಅನ್ನು ತವರು ಮನೆಯಿಂದ ನೀಡುವಂಥ ಸ್ತ್ರೀಧನದ ರೂಪದಲ್ಲಿ ಕೊಡಲಾಯಿತು.
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಆಹ್ವಾನ ಪತ್ರಿಕೆ ರಿಲೀಸ್ ಆಗಿ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜುಲೈ 14ರವರೆಗೆ ಶುಭ ವಿವಾಹ, ಶುಭ ಆಶೀರ್ವಾದ ಮತ್ತು ಮಂಗಳ ಉತ್ಸವ ಎನ್ನುವ ಮೂರು ದಿನಗಳ ಕಾರ್ಯಕ್ರಮ ನಡೆಯಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA