ಬೆಂಗಳೂರು ಕ್ಲೀನ್ಸ್ ರಸ್ತೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಅಳವಡಿಸಿದ್ದ ಅನಧಿಕೃತ ಬ್ಯಾನರ್ ಅನ್ನು ತೆರವುಗೊಳಿಸಿ 50,000/- ರೂ. ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗ, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ರಾಜ್ಯದ ಎಲ್ಲಾ ಪಧಾಧಿಕಾರಿಗಳು ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ, ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಕಛೇರಿಯ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಲಾಗಿತ್ತು.


