ಮಳೆ ನೀರು ಹರಿಯುವ ಮೋರಿಯಲ್ಲಿ 500 ರೂಪಾಯಿ ಮುಖಬೆಲೆಯ ಲಕ್ಷಕ್ಕೂ ಅಧಿಕ ಮೌಲ್ಯದ ನೋಟುಗಳು ತೇಲಿ ಬಂದಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಅಟಪಡಿ ಬಳಿಯ ಮೋರಿಯಲ್ಲಿ ನಡೆದಿದೆ.
ಮೊದಲಿಗೆ ಇದು ನಕಲಿ ನೋಟು ಅಂತ ಜನ ಭಾವಿಸಿದ್ದರು. ಆದ್ರೆ ಸೂಕ್ಷ್ಮವಾಗಿ ಗಮನಿಸಿದಾಗ ನಿಜವಾದ ನೋಟು ಎನ್ನುವುದು ತಿಳಿದಿದೆ. ತಕ್ಷಣವೇ ಕೈಗೆ ಸಿಕ್ಕಷ್ಟು ಬಾಚಿಕೊಂಡು ಜನ ಸ್ಥಳದಿಂದ ಓಡಿದ್ದಾರೆ.
ಇಷ್ಟೊಂದು ನೋಟುಗಳನ್ನು ನೀರಿಗೆ ಎಸೆದಿದ್ದು ಯಾರು? ಎನ್ನುವುದು ತಿಳಿದು ಬಂದಿಲ್ಲ. ಸುಮಾರು 2 ರಿಂದ 2.5 ಲಕ್ಷದಷ್ಟು ₹500ರ ನೋಟುಗಳು ಮೋರಿಯಲ್ಲಿ ಸಿಕ್ಕಿವೆಯಂತೆ!
ಕೆಲವರಂತೂ ತಮಗೆ ಸಿಕ್ಕ ಹಣ ಎಷ್ಟು ಅನ್ನೋದನ್ನೂ ಹೇಳುತ್ತಿಲ್ಲ.
ಒಂದು ವೇಳೆ ಪೊಲೀಸರು ಬಂದು ವಾಪಾಸ್ ಪಡೆಯಬಹುದು ಅನ್ನುವ ಭಯದಲ್ಲಿದ್ದಾರೆ. ಹಾಗಾಗಿಯೇ ಇಲ್ಲಿ ಅಚಾನಕ್ ಆಗಿ ಸಿಕ್ಕಿರೋ ಹಣ 2.5 ಲಕ್ಷಕ್ಕಿಂತಲೂ ಹೆಚ್ಚು ಎಂದೇ ಭಾವಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296