ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(ಪೋಕ್ಸೋ) ನ್ಯಾಯಾಲಯ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿ, ಆರೋಪಿ ಹರಿಕರ ಸುದನ್ ನ ಮನೆಯ ಮುಂದೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಿರಿಯಾನಿ ಕೊಡುತ್ತೇನೆ ಎಂದು ಕರೆದೊಯ್ದು, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ತನಿಖಾಧಿಕಾರಿ ರಾಧಾಕೃಷ್ಣ ಅವರು ಘನ ನ್ಯಾಯಾಲಯಕ್ಕೆ ದೋಷಾರೋಪಣಾಪಟ್ಟಿಯಲ್ಲಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ನಡೆದಿದ್ದು, ಈ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಆರೋಪಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯದ ನ್ಯಾಯಾಧೀಶರು ಅಪರಾಧಿಗೆ 50 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಮೊತ್ತವನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡಿದ್ದಾರೆ.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ವಾದ ಮಂಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q