nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026
    Facebook Twitter Instagram
    ಟ್ರೆಂಡಿಂಗ್
    • ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    • ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
    • ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿಎಸ್‌ ಐ ನೇಮಕಾತಿ ಅಕ್ರಮದ 52 ಆರೋಪಿ ಅಭ್ಯರ್ಥಿಗಳು ಡಿಬಾರ್
    ರಾಜ್ಯ ಸುದ್ದಿ June 22, 2023

    ಪಿಎಸ್‌ ಐ ನೇಮಕಾತಿ ಅಕ್ರಮದ 52 ಆರೋಪಿ ಅಭ್ಯರ್ಥಿಗಳು ಡಿಬಾರ್

    By adminJune 22, 2023No Comments2 Mins Read
    PSI recruitment

    ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್‌ ಐ ಹುದ್ದೆಗಳ ನೇಮಕಾತಿ ಹಗರಣದ 52 ಜನ ಆರೋಪಿತ ಅಭ್ಯರ್ಥಿಗಳನ್ನು ಪರೀಕ್ಷೆಯಿಂದ ಶಾಶ್ವತವಾಗಿ ಡಿಬಾರ್ ಮಾಡಿ ಪೊಲೀಸ್ ನೇಮಕಾತಿ ವಿಭಾಗ ಆದೇಶ ಹೊರಡಿಸಿದೆ.

    ಆದ್ದರಿಂದ ಉಳಿದ ಅಭ್ಯರ್ಥಿಗಳಿಗೆ ನೌಕರಿ ಸಿಗುವ ವಿಶ್ವಾಸ ಮೂಡಿದ್ದು, ಪ್ರಕರಣದ ತೀರ್ಪಿನ ಮೇಲೆ ಅವಲಂಬನೆಯಾಗಲಿದೆ. ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು 52 ಆರೋಪಿಗಳ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ನಡೆಸುವ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ನಿಷೇಧಿಸಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

    ಬೆಂಗಳೂರು ನಗರ, ಕಲಬುರಗಿ, ಹುಬ್ಬಳ್ಳಿ- ಧಾರವಾಡ ನಗರ, ತುಮಕೂರು ನಗರ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ ಐಆರ್ ದಾಖಲಾಗಿದ್ದವು. ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಪತ್ರಿಕೆ-1ರಲ್ಲಿ ಕೆಲ ಅಭ್ಯರ್ಥಿಗಳು ಬ್ಲೂಟೂತ್, ಇತರೆ ಎಲೆಕ್ಟ್ರಾನಿಕ್ ಸಾಧನ ಬಳಸಿ ಅಕ್ರಮ ಎಸಗಿದ್ದು ಬೆಳಕಿಗೆ ಬಂದಿತ್ತು. ಕೆಲವು ಅಭ್ಯರ್ಥಿಗಳು ಓಎಂಆರ್  ಶೀಟ್‌ ಗಳನ್ನೇ ತಿದ್ದುಪಡಿ ಮಾಡಿಸಿಕೊಂಡಿರುವುದು ದೃಢವಾಗಿದ್ದರಿಂದ ಅಂಥಹ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

    ಸದ್ಯ 1977ರ ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮ-20ರಲ್ಲಿ ಉಲ್ಲೇಖಿಸಿದಂತೆ 52 ಅಭ್ಯರ್ಥಿಗಳು ದುರ್ನಡತೆ ತೋರಿದ್ದಾರೆ. ನಕಲಿ ವ್ಯಕ್ತಿಗಳು, ಸುಳ್ಳು ಹೇಳಿಕೆ, ವಾಸ್ತವ ಮಾಹಿತಿ ಮರೆಮಾಚಿರುತ್ತಾರೆ. ನೇಮಕಾತಿ ಸಮಿತಿ ನೀಡಿರುವ ಸೂಚನೆಗಳನ್ನು ಪರೀಕ್ಷಾ ಕೊಠಡಿಯಲ್ಲಿ ಉಲ್ಲಂಘಿಸಿ ನಕಲು ಮಾಡಿರುವುದನ್ನು ದುರ್ನಡತೆ ಎಂದು ನಿರ್ಧರಿಸಲಾಗಿದೆ ಎಂದು ನೇಮಕಾತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

    ಡಿಬಾರ್ ಆದ ಅಭ್ಯರ್ಥಿಗಳಲ್ಲಿ 10 ಜನ ಕಾನ್‌ ಸ್ಟೇಬಲ್‌ ಗಳು ಸಹ ಇದ್ದಾರೆ. ಇದೀಗ ಅವರ ಪೊಲೀಸ್ ಸೇವೆಗೂ ಕುತ್ತು ಬಂದಿದೆ. ಅಲ್ಲದೆ, 402 ಎಸ್ಎಐ ಹುದ್ದೆಗಳ ನೇಮಕಾತಿಗೂ ಇವರು ಅರ್ಜಿ ಸಲ್ಲಿಸಿದ್ದರು. ದೈಹಿಕ ಪರೀಕ್ಷೆ ಮುಗಿದಿದ್ದು, ಲಿಖಿತ ಪರೀಕ್ಷೆಯಿಂದ ಅಂಥವರನ್ನ ಹೊರಹಾಕಲಾಗಿದೆ.

    ಡಿಬಾರ್ ಆದ ಅಭ್ಯರ್ಥಿಗಳು: ಎಸ್. ಜಾಗೃತ್, ಬಿ. ಗಜೇಂದ್ರ, ಸೋಮನಾಥ ಮಲ್ಲಿಕಾರ್ಜುನಯ್ಯ ಹಿರೇಮಠ, ಎಚ್. ಯು. ರಘುವೀರ್, ಎಂ. ಸಿ. ಚೇತನ್‌ಕುಮಾರ್, ಬಿ. ಸಿ. ವೆಂಕಟೇಶ್ ಗೌಡ, ಎ. ಪಿ. ಮನೋಜ್, ಜಿ. ಆರ್. ಮಂಜುನಾಥ್, ಪಿ. ಸಿದ್ದಲಿಂಗಪ್ಪ, ಎಸ್. ಮಮತೇಶ್ ಗೌಡ, ಎಚ್. ಯಶವಂತ್‌ ಗೌಡ, ಸಿ. ಎಂ. ನಾರಾಯಣ, ಸಿ. ಎಸ್. ನಾಗೇಶ್ ಗೌಡ, ಆರ್. ಮಧು, ಸಿ. ಯಶವಂತ ದೀಪ್, ಸಿ. ಕೆ. ದಿಲೀಪ್‌ ಕುಮಾರ್, ರಚನ ಹಣಮಂತ್, ಜಿ. ಶಿವರಾಜ್, ಸಿ. ಪ್ರವೀಣ್‌ ಕುಮಾರ್, ಕೆ. ಸೂರ್ಯನಾರಾಯಣ, ಸಿ. ಎಂ. ನಾಗರಾಜ್, ಜಿ. ಸಿ. ರಾಘವೇಂದ್ರ, ಬೀರಪ್ಪ ಮೇತಿ, ಎಚ್. ಮೋಹನ್‌ ಕುಮಾರ್, ಎನ್. ದಿಲೀಪ್‌ ಕುಮಾರ್, ದರ್ಶನ್‌ ಗೌಡ, ಲಕ್ಕಪ್ಪ ರಾವುತಪ್ಪ, ಎಚ್. ಬಿ. ಹರೀಶ್, ಜೆ. ಕುಶಾಲ್‌ ಕುಮಾರ್, ವೀರೇಶ್, ಎನ್. ಚೇತನ್, ಕೆ. ಪ್ರವೀಣ್‌ ಕುಮಾರ್, ಅರುಣ್‌ ಕುಮಾರ್, ವಿಶಾಲ್, ಎಚ್. ವಿ. ಸುನೀಲ್, ಎಚ್. ಎನ್. ದೇಸಾಯಿ, ಶ್ರೀಧರ್, ಶಾಂತಿಬಾಯಿ, ಕಲ್ಲಪ್ಪ ಸಿದ್ದಪ್ಪ ಅಲ್ಲಾಪುರ, ಸುಪ್ರೀಯ ಹುಂಡೆಕರ್, ಪ್ರಭು ಇಟ್ಟಗರ್, ವಿಜಯಕುಮಾರ್ ಪೂಜಾರಿ, ಇಸ್ಮಾಲ್ ಖಾದಿರ್, ಯಶವಂತ ಮಾನೆ, ಎಸ್. ಶರಣಪ್ಪ ಪಾಟೀಲ್, ಬಿ. ಜೋಗೂರ್, ಸೋಮನಾಥ್, ಶ್ರೀಮಂತ ಸತ್ತಾಪುರ್, ರವಿರಾಜ್, ಪೀರಪ್ಪ ಮತ್ತು ಶ್ರೀಶೈಲಾ ಡಿಬಾರ್ ಆದ ಅಭ್ಯರ್ಥಿಗಳು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಬಳ್ಳಾರಿ: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಹಮ್ಮಿಕೊಳ್ಳಲಾಗಿರುವ ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ’ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಮತ್ತು…

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.