ಬೆಂಗಳೂರು: 5,300 ಪೌರ ಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದ್ದು, ನೇಮಕಾತಿ ಆರಂಭಿಸುವಂತೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೇರ ಪಾವತಿ ವೇತನ ಪಡೆಯುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು 3 ವರ್ಷ ಗಳಲ್ಲಿ ಹಂತ ಹಂತವಾಗಿ ಖಾಯಂಗೊಳಿಸಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು.
ಪೌರಕಾರ್ಮಿಕರು ಮತ್ತು ಸ್ವಚ್ಛತಾ ಕಾರ್ಮಿಕರಿಗೆ ಆರೋಗ್ಯ ವಿಮೆ ಸೌಲಭ್ಯವನ್ನು ವಿಸ್ತರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


