ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಗ್ತಿದೆ. ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಶನಿವಾರ 58, 14, 524 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಪ್ರಯಾಣ ಬೆಳೆಸಿದ್ದಾರೆ.
ಶನಿವಾರ ಬಹುತೇಕ ಎಲ್ಲಾ ಸರ್ಕಾರಿ ಬಸ್‌ಗಳು ಅದರಲ್ಲೂ ಧರ್ಮಸ್ಥಳ, ಚಾಂಮುಂಡೇಶ್ವರಿ ದೇವಾಲಯ ಸೇರಿ ರಾಜ್ಯದ ಪ್ರಸಿದ್ಧ ದೇವಾಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ. ಶನಿವಾರ ಬೆಳಗ್ಗೆಯಿಂದ ಮಧ್ಯ ರಾತ್ರಿವರೆಗೆ ನಾಲ್ಕು ರಸ್ತೆ ಸಾರಿಗೆ ನಿಗಮಗಳಲ್ಲಿ ಸಾಮಾನ್ಯ ಸಾರಿಗೆ ಬಸ್ ಗಳಲ್ಲಿ ಬರೋಬ್ಬರಿ 58, 14, 524 ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಮಹಿಳೆಯರ ಉಚಿತ ಟಿಕೆಟ್ ಮೌಲ್ಯ ಒಟ್ಟು 13. 41 ಕೋಟಿ ರೂ. ಆಗಿದೆ.
ಶನಿವಾರ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 17, 29, 314, ಬಿಎಂಟಿಸಿಯಲ್ಲಿ 18, 95, 144 ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ನಲ್ಲಿ 14, 01, 910 ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ 7, 88, 156 ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇನ್ನು ಭಾನುವಾರ ಶನಿವಾರದಂತೆ ಹೆಚ್ಚು ಮಹಿಳೆಯರು ಪ್ರಯಾಣ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


