ಧಾರವಾಡ: ಇಲ್ಲಿನ ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ ಇಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 183 ಪ್ರಕರಣಗಳನ್ನು 5,77,12,376 ರೂ.ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು.
ಹಿರಿಯ ನ್ಯಾಯಮೂರ್ತಿಗಳಾದ ಎಸ್.ಜಿ.ಪಂಡಿತ್ ಅವರ ಮಾರ್ಗದರ್ಶನದಲ್ಲಿ,ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್, ರವಿ ವಿ .ಹೊಸಮನಿ ಮತ್ತು ಅನಂತ ರಾಮನಾಥ ಹೆಗಡೆ ಹಾಗೂ ಲೋಕ ಅದಾಲತ್‌ನ ಸದಸ್ಯರುಗಳಾದ ಎಲ್ . ಟಿ .ಮಂಟಗಣಿ, ಎಸ್.ಎಸ್.ಬಾವಾಖಾನ,ಎಮ್.ಟಿ.ಬಂಗಿ ಮತ್ತು ಎಮ್.ಸಿ.ಹುಕ್ಕೇರಿ ಅವರನ್ನೊಳಗೊಂಡ 4 ಪೀಠಗಳಲ್ಲಿ ವ್ಯಾಜ್ಯಗಳ ರಾಜಿ ಸಂಧಾನ ನಡೆದವು.
ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಹಾಗೂ ವಕೀಲರಾದ ಎಮ್.ಸಿ.ಹುಕ್ಕೇರಿ ಅವರ ಪೀಠವು ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 13 ವರ್ಷಗಳ ಹಳೆಯದಾದ ದಿವಾಣಿ ಪ್ರಕರಣವನ್ನು ರಾಜಿ – ಸಂಧಾನದ ಮೂಲಕ ಉಭಯ ಪಕ್ಷಗಾರರ ಸಮಕ್ಷಮ ಇತ್ಯರ್ಥಪಡಿಸಿದ್ದು ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್‌ನ ಹೆಗ್ಗಳಿಕೆಯಾಗಿದೆ ಎಂದು ಹೈಕೋರ್ಟ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಹಾಗೂ ನ್ಯಾಯಾಂಗದ ಅಧಿಕ ವಿಲೇಖನಾಧಿಕಾರಿ ವೆಂಕಟೇಶ ಆರ್ ಹುಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy