ಆಂಧ್ರಪ್ರದೇಶ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಟೋಕನ್ ಗಳ ವಿತರಣೆಯ ಸಮಯದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಆರು ಜನ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ.
ತಿರುಪತಿಯ ವಿಷ್ಣು ನಿವಾಸದಲ್ಲಿ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಗಳ ವಿತರಣೆಯ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿ ಭಕ್ತರು ಸಾವನ್ನಪ್ಪಿದ್ದಾರೆ.
ಶುಕ್ರವಾರದಿಂದ ಪ್ರಾರಂಭವಾಗಿ 10 ದಿನಗಳ ಅವಧಿಗೆ ಭಕ್ತರಿಗೆ ವಿಶೇಷ ‘ದರ್ಶನ’ಟಿಕೆಟ್ ಗಳಿಗಾಗಿ ದೇಶಾದ್ಯಂತ ಸಾವಿರಾರು ಮಂದಿ ಭಕ್ತರು ಜಮಾಯಿಸಿದ್ದರು.
ಈ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಟೋಕನ್ ಪಡೆಯಲು ಯತ್ನಿಸಿದ ಪರಿಣಾಮ ನೂಕುನುಗ್ಗಲು ಉಂಟಾಯಿತು. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ರುಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಕಾಲ್ತುಳಿತದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx