ಬೆಂಗಳೂರು: ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ಸಹಿ ಹಾಕಿದರು.
ಇದೇ ವೇಳೆ ಮಾತನಾಡಿದ ಅವರು, ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3,695 ಆನೆಗಳು ನಮ್ಮಲ್ಲಿವೆ. ಮಾನವ — ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ ಎಂದು ಅವರು ಹೇಳಿದರು.
ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW