ತಮಿಳುನಾಡು: ಪಟಾಕಿ ಘಟಕದಲ್ಲಿ ನಡೆದ ಭೀಕರ ಸ್ಫೋಟದ ಪರಿಣಾಮ 6 ಮಂದಿ ಕಾರ್ಮಿಕರು ಪ್ರಾಣ ಕಳೆದುಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ವಿರುದುನಗರದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ರಾಸಾಯನಿಕಗಳನ್ನು ಬೆರೆಸುವ ಪ್ರಕ್ರಿಯೆಯ ವೇಳೆ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರಗೆ ನಾಲ್ಕು ಕೊಠಡಿಗಳು ನೆಲಸಮವಾಗಿವೆ. 6 ಕಾರ್ಮಿಕರು ಸಾವನ್ನಪ್ಪಿದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕದಳ ಮತ್ತು ರಕ್ಷಣಾ ಸಿಬ್ಬಂದಿ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx