ಸರಗೂರು: ತಾಲೂಕಿನ ಆದಿಕರ್ನಾಟಕ ಮಹಾಸಭಾದ ಮಾಜಿ ಅಧ್ಯಕ್ಷ ಹಾಗೂ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ವರ್ಷದ ಹುಟ್ಟುಹಬ್ಬವನ್ನು ಆದಿಕರ್ನಾಟಕ ಮಹಾಸಭಾ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಿವಣ್ಣ ಅವರಿಗೆ ಸಂಪ್ರದಾಯಬದ್ಧವಾಗಿ ಪೇಟ ತೊಡಿಸಿ, ಶಾಲು ಹೊದಿಸಿ ಹಾಗೂ ಬೃಹತ್ ಹಾರ ಹಾಕುವ ಮೂಲಕ ಆತ್ಮೀಯವಾಗಿ ಸನ್ಮಾನಿಸಲಾಯಿತು. ಬಳಿಕ ಕೇಕ್ ಕತ್ತರಿಸಿ ಜನ್ಮದಿನವನ್ನು ಆಚರಿಸಿ, ಶುಭಾಶಯ ಕೋರಲಾಯಿತು.
ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷ ಪಿ. ಚಿನ್ನಣ್ಣ ಮಾತನಾಡಿ, “ಶಿವಣ್ಣ ಅವರು ಸಮಾಜಮುಖಿ ಚಟುವಟಿಕೆಗಳು ಹಾಗೂ ಸಂಘಟನಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಶ್ರಮಿಸಿದ್ದಾರೆ,” ಎಂದು ಅವರ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಮುಂಬರುವ ದಿನಗಳಲ್ಲೂ ಅವರು ಜನಪರ ಕಾರ್ಯಗಳನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿಆದಿಕರ್ನಾಟಕ ಮಹಾಸಭಾದ ಅಧ್ಯಕ್ಷ ಇಟ್ನ ರಾಜಣ್ಣ, ನಾಗಣ್ಣ ತುಂಬಸೋಗೆ, ಯಶವಂತಪುರ ಶ್ರೀನಿವಾಸ, ಚನ್ನೀಪುರ ಮಲ್ಲೇಶ್, ಲಂಕೆ ರಮೇಶ್, ಮರಿಲಿಂಗಯ್ಯ, ಸೋಮಣ್ಣ, ಗ್ರಾಮೀಣ ಮಹೇಶ್, ಸೂರ್ಯ ಕುಮಾರ್, ಪುಟ್ಟಯ್ಯ, ಮಹದೇವ ಕುಮಾರ್ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು, ಸದಸ್ಯರು ಹಾಗೂ ಶಿವಣ್ಣ ಅವರ ಅಭಿಮಾನಿಗಳು ಉಪಸ್ಥಿತರಿದ್ದು, ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ದೊರೆಯಲಿ ಎಂದು ಶುಭ ಹಾರೈಸಿದರು.
ವರದಿ:ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


