ತುಮಕೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 29ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಜನವರಿ 29ರ ರಾತ್ರಿ 11.59 ಗಂಟೆಯೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಫೆಬ್ರವರಿ 15ರಂದು ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4