ಬೆಂಗಳೂರು: ದಕ್ಷಿಣ ವಲಯದ ಇಂದಿರಾ ಕ್ಯಾಂಟೀನ್ ನಲ್ಲಿ ಸುಮಾರು 7 ಕೋಟಿ ರೂ.ಗಳ ಅವ್ಯವಹಾರದ ಹಿನ್ನೆಲೆ ಬಿಬಿಎಂಪಿ ವಲಯದ ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಪಿ. ಅವರನ್ನು ಅಮಾನತುಗೊಳಿಸಲಾಗಿದೆ.
ಪಾಲಿಕೆಯ ದಕ್ಷಿಣ ವಲಯಕ್ಕೆ ಆಹಾರ ಪೂರೈಕ ಮಾಡಿದ ಚೆಫ್ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಬಿಲ್ ಪಾವತಿಯಲ್ಲಿ 7 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆದಿದೆ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಆರೋಗ್ಯಾಧಿಕಾರಿಯಾಗಿದ್ದ ಡಾ.ಕಲ್ಪನಾ ಪಿ ಅವರು ಆರ್ಡರ್ ಗಳನ್ನು ಪರಿಶೀಲಿಸದೆ ಅಂದಾಜು ರೂ. 9.72 ಕೋಟಿ ಪಾವತಿಸಿದ್ದಾರೆ. ಆದರೆ ಅದಕ್ಕೆ ವಾಸ್ತವವಾಗಿ ಪಾವತಿಸಬೇಕಾದದ್ದು ಕೇವಲ ರೂ. 2.27 ಕೋಟಿ ಮಾತ್ರ,. ಇದರಿಂದ ಹೆಚ್ಚುವರಿಯಾಗಿ ಸುಮಾರು 7 ಕೋಟಿ ರೂ. ಪಾವತಿಸಿದ್ದಕ್ಕಾಗಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW